ನವದೆಹಲಿ : ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸುತ್ತಿದ್ದಾರೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಅವರು ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು, ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ, ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ಗಳನ್ನು ತೆರೆಯಲಿದೆ ಎಂದರು.