alex Certify BREAKING : ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಕಲಬುರಗಿ : ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾಲೆಯಲ್ಲಿ ಊಟ ಮಾಡಿದ ನಂತರ ಒಟ್ಟು 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆ ಸೇರಿ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಅಕ್ಕಿ ಹುಳು ಹಿಡಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಉಳಿದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸ್ಥಳೀಯರು ಕೂಡ ನೆರವಾಗಿದ್ದರು. ಟ್ರಾಕ್ಟರ್ ಹಾಗೂ ಬೈಕ್ ನ ಮೂಲಕ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳೀಯ ಕಾರ್ಯಕರ್ತರು ನೆರವಾದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...