ನವದೆಹಲಿ : ಮಾರ್ಚ್ 12 ರಂದು ರಾತ್ರಿ 11:32 ಕ್ಕೆ ಭಾರತದ ಕರಾವಳಿಯ ಅಂಡಮಾನ್ ಸಮುದ್ರ ಪ್ರದೇಶದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಭೂಕಂಪವು 67 ಕಿಲೋಮೀಟರ್ ಆಳದಲ್ಲಿ ಸಂಭವಿಸಿದ್ದು, ಅದರ ಕೇಂದ್ರಬಿಂದು ಅಕ್ಷಾಂಶ 10.06 ಮತ್ತು ರೇಖಾಂಶ 95.00 ರಲ್ಲಿದೆ. ಭೂಕಂಪದಿಂದ ಜನರು ಬೆಚ್ಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಸಾವುನೋವುಗಳಾದ ಬಗ್ಗೆ ವರದಿಯಾಗಿಲ್ಲ.