alex Certify BREAKING : ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ ; ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು.

ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ, ಹೆಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ಈಗಾಗಲೇ ಅಗತ್ಯ ಸಲಕರಣೆಗಳನ್ನು ಹೊತ್ತ ಬೆಂಗಳೂರಿನಲ್ಲಿರುವ ಎನ್.ಡಿ.ಆರ್.ಎಫ್ ಹಾಗೂ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಸೇನಾಪಡೆಯ ತಂಡಗಳು ವಯನಾಡು ತಲುಪಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿವೆ. ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...