![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿ.ಆರ್. ಹಿಲ್ಸ್ ಅರಣ್ಯ ಪ್ರದೇಶದಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬಿ.ಆರ್. ಹಿಲ್ಸ್ ನಲ್ಲಿ ಕೆಎಸ್ ಅರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.