ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 6 ಜನ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಪ್ರಾಯೋಗಾಲಾಯದ ವರದಿ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 6 ಜನರು ಮೃತಪಟ್ಟಿದ್ದು, ಹಲವರು ಅಸ್ವಸ್ಥರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದಯಕೀಯ ಕಾಲೇಜು ಮತ್ತು ಪ್ರಯೋಗಾಲಯದ ವರದಿ ಬಂದಿದ್ದು, ವರದಿಯಲ್ಲಿ ನೀರಿನಲ್ಲಿ ಕಾಲರಾ ಮಾದರಿಯ ಬ್ಯಾಕ್ಟೀರಿಯಾ ಪತ್ತೆಯಾಗಿರುವುದು ದೃಢವಾಗಿದೆ.
ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಲೋಕಾಯುಕ್ತ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು, ಆಗಸ್ಟ್ 24 ರಂದು ವರದಿಯೊಂದಿಗೆ ಕಚೇರಿಗೆ ಬರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಸೂಚನೆ ನೀಡಿದ್ದಾರೆ.