ಮುಂಬೈ: ಮಹಾರಾಷ್ಟ್ರದ ಉಜಾನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮಗುಚಿದ ಪರಿಣಾಮ ಕನಿಷ್ಠ ಆರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಪುಣೆ ಜಿಲ್ಲೆಯ ಇಂದಾಪುರ ತಹಸಿಲ್ಗೆ ಸಮೀಪವಿರುವ ಕಲಾಶಿ ಗ್ರಾಮದ ಬಳಿ ಈ ಘಟನೆ ವರದಿಯಾಗಿದೆ. ಘಟನೆ ವರದಿಯಾದ ಕೂಡಲೇ, ರಕ್ಷಣಾ ಕಾರ್ಯಾಚರಣೆಗಾಗಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪುಣೆ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.