ಕೋಲಾರ : ಭೂಮಿ ಪರಿವರ್ತನೆಗೆ 8.5 ಲಕ್ಷ ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೋಲಾರದಲ್ಲಿ ನಡೆದಿದೆ.
ಆರ್ ಐ ಗೋಪಾಲಕಷ್ಣ ಹಾಗೂ ಕೇಸ್ ವರ್ಕರ್ ನಾಗೇಂದ್ರ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಹೊಸಕೋಟೆ ಮೂಲದ ಮಹೇಶ್ ಎಂಬುವವರಿಂದ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಂಬಾಡಿ ಗ್ರಾಮದ 5 ಎಕರೆ ಜಮೀನಿನ ಭೂ ಪರಿವರ್ತನೆ ಮಾಡಲು 5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅಂತೆಯೇ ಹಣ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರ್ ಐ ಗೋಪಾಲಕಷ್ಣ ಹಾಗೂ ಕೇಸ್ ವರ್ಕರ್ ನಾಗೇಂದ್ರರನ್ನು ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.