alex Certify BREAKING : ವಾರಾಣಸಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಾರಾಣಸಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವು

ವಾರಾಣಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಟ್ರಕ್ ಗೆ ಕಾರು ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, 3 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ. ಪೊಲೀಸರು ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...