ತುಮಕೂರು : ದಾಖಲೆ ಇಲ್ಲದ 8 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ತುಮಕೂರು ನಗರದ ಬಟವಾಡಿ ಚೆಕ್ ಪೋಸ್ಟ್ ನಲ್ಲಿ ಜಪ್ತಿ ಮಾಡಲಾಗಿದೆ.
ತಸೀನಾ, ಬಾನು, ಅನ್ಸರ್ ಎಂಬ ಮೂವರು ಮಹಿಳೆಯರ ವ್ಯಾನಿಟಿ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ. ಹಣ ಸಾಗಿಸುತ್ತಿರುವುದಕ್ಕೆ ಯಾವುದೇ ದಾಖಲೆ ಇಲ್ಲದೇ ಹಿನ್ನೆಲೆ ಹಣ ಜಪ್ತಿ ಮಾಡಲಾಗಿದೆ.
ತುಮಕೂರಿನ ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಕಾರನ್ನು ಜಪ್ತಿ ಮಾಡಿದಾಗ ಹಣ ಪತ್ತೆಯಾಗಿದೆ.