ನವದೆಹಲಿ : ಸಂಸತ್ತಿನಲ್ಲಿ ಬುಧವಾರ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ನಿನ್ನೆಯ ಭದ್ರತಾ ಲೋಪದ ಘಟನೆಗಾಗಿ ಲೋಕಸಭಾ ಸಚಿವಾಲಯವು 8 ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ನಿನೆ ಸಂಸತ್ತಿನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ ಬೆನ್ನಲ್ಲೇ 8 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಇನ್ನು ಲೋಕಸಭಾ ಸಚಿವಾಲಯದ ಕೋರಿಕೆಯ ಮೇರೆಗೆ, ಸಂಸತ್ತಿನ ಭದ್ರತಾ ಲೋಪ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಸಿಆರ್ಪಿಎಫ್ನ ಡಿಜಿ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಸಂಸ್ಥೆಗಳ ಸದಸ್ಯರು ಮತ್ತು ತಜ್ಞರೊಂದಿಗೆ ವಿಚಾರಣಾ ಸಮಿತಿ ರಚಿಸಲಾಗಿದೆ.