alex Certify BREAKING : ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ : 8 ಭದ್ರತಾ ಸಿಬ್ಬಂದಿಗಳು ಅಮಾನತು ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ : 8 ಭದ್ರತಾ ಸಿಬ್ಬಂದಿಗಳು ಅಮಾನತು ಮಾಡಿ ಆದೇಶ

ನವದೆಹಲಿ : ಸಂಸತ್ತಿನಲ್ಲಿ ಬುಧವಾರ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ನಿನ್ನೆಯ ಭದ್ರತಾ ಲೋಪದ ಘಟನೆಗಾಗಿ ಲೋಕಸಭಾ ಸಚಿವಾಲಯವು 8 ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.

ನಿನೆ ಸಂಸತ್ತಿನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ ಬೆನ್ನಲ್ಲೇ 8 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಲೋಕಸಭಾ ಸಚಿವಾಲಯದ ಕೋರಿಕೆಯ ಮೇರೆಗೆ, ಸಂಸತ್ತಿನ ಭದ್ರತಾ ಲೋಪ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಸಿಆರ್ಪಿಎಫ್ನ ಡಿಜಿ ಅನೀಶ್ ದಯಾಳ್ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಸಂಸ್ಥೆಗಳ ಸದಸ್ಯರು ಮತ್ತು ತಜ್ಞರೊಂದಿಗೆ ವಿಚಾರಣಾ ಸಮಿತಿ ರಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...