ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೊದಲು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಆಗಮಿಸಿದ ವೈದ್ಯರ ತಂಡ ವೈದ್ಯಕೀಯ ತಪಾಸಣೆ ನಡೆಸಿ ನಂತರ ಆಸ್ಪತ್ರೆಗೆ ದಾಖಲು ಮಾಡಲು ಸೂಚನೆ ನೀಡಿತ್ತು. ಅಂತೆಯೇ ಪವಿತ್ರಾ ಗೌಡರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೂ, ನಟ ದರ್ಶನ್ ಮತ್ತು ಸಹಚರರಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಸಾಕ್ಷ್ಯಕ್ಕಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ.ರೇಣುಕಾಸ್ವಾಮಿ ಮೇಲೆ ಮೊದಲಿಗೆ ಪವಿತ್ರಾ ಗೌಡ ಚಪ್ಪಲಿಯಿಂದ ಹಲ್ಲೆ ನಡೆಸಿದ್ದರು. ಹಲ್ಲೆಗೆ ಬಳಸಿದ್ದ ಚಪ್ಪಲಿಯನ್ನು ಅವರ ನಿವಾಸದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಕೆಲವು ಮಹತ್ವದ ವಸ್ತುಗಳನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.ರೇಣುಕಾ ಸ್ವಾಮಿ ಮೇಲೆ ಪವಿತ್ರಾ ಗೌಡ ಹಲ್ಲೆಗೆ ಬಳಸಿದ ಚಪ್ಪಲಿ ಜೊತೆಗೆ ಅವರು ಧರಿಸಿದ್ದ ಬಟ್ಟೆ ಶಾಲನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಅಲ್ಲದೆ ನಿವಾಸದಲ್ಲಿ ಕೆಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.