ಬೆಂಗಳೂರು : ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಕೆ ಆರ್ ಮಾರುಕಟ್ಟೆಯಲ್ಲಿ ರಾಶಿ ಬಿದ್ದಿದ್ದ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬಳಿಕ ಬೆಂಕಿ ಫ್ಲೈ ಓವರ್ ಬಳಿಯೂ ಹರಡಿದಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ . ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.