alex Certify BREAKING : ಬೆಂಗಳೂರಲ್ಲಿ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಯುವಕರು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಯುವಕರು.!

ಬೆಂಗಳೂರು : ಬೆಂಗಳೂರಿನಲ್ಲಿ ಹಾಲು ತರಲು ಹೊರಗೆ ಹೋಗಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಎಳೆದೊಯ್ಯಲು ಯತ್ನಿಸಿದ್ದು, ಬಳಿಕ ಸಾರ್ವಜನಿಕರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ನಿನ್ನೆ ರಾತ್ರಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೊನಿ ಬಳಿ ಈ ಘಟನೆ ನಡೆದಿದೆ.
ಹಾಲು ತರಲು ಮನೆಯಿಂದ ಹೊರಕ್ಕೆ ಬಂದ ಮಹಿಳೆಯನ್ನು ಮದ್ಯದ ನಶೆಯಲ್ಲಿದ್ದ ವ್ಯಕ್ತಿ ಆಕೆಯ ಬಾಯಿಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ .

ಕೂಡಲೇ ಆಕೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು, ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಗ್ರಾಮದ 10 ಜನರ ಗುಂಪು ವ್ಯಕ್ತಿಯ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದೆ. ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...