ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯರ ಫೋಟೋ, ವಿಡಿಯೋ ತೆಗೆಯುತ್ತಿದ್ದ ಕಾಮುಕ ಅರೆಸ್ಟ್ ಆಗಿದ್ದಾನೆ.
ಮಹೇಶ್ ಎಂಬ ಕಾಮುಕನನ್ನು ಜನರೇ ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಗೂ ಕಾಮುಕನಿಗೆ ನಮ್ಮ ಮೆಟ್ರೋ ಅಧಿಕಾರಿಗಳು 5000 ದಂಡ ವಿಧಿಸಿದ್ದಾರೆ.ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರನ್ನು ಹಿಂಬಾಲಿಸಿ ಆಕೆ ಕುಳಿತುಕೊಳ್ಳುವಾಗ ಮಹೇಶ್ ಫೋಟೋ, ವಿಡಿಯೋ ತೆಗೆದಿದ್ದಾನೆ. ಬಳಿಕ ಯುವತಿ ಮಹೇಶ್ ಗೆ ಕಪಾಳ ಮೋಕ್ಷ ಮಾಡಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ನಂತರ ಜನರೇ ಮಹೇಶ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಈತನ ಮೊಬೈಲ್ ಪರಿಶೀಲನೆ ನಡೆಸಿದಾಗ ಹಲವು ಯುವತಿಯರ ಫೋಟೋ, ವಿಡಿಯೋ ಇರುವುದು ಪತ್ತೆಯಾಗಿದೆ. ನಮ್ಮ ಮೆಟ್ರೋ ಅಧಿಕಾರಿಗಳು ಕಾಮುಕ ಮಹೇಶ್ ನಿಗೆ 5000 ದಂಡ ವಿಧಿಸಿ ಜಯನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.