ಚಿತ್ರದುರ್ಗ : ಚಿತ್ರದುರ್ಗದಲ್ಲಿ ಟೈರ್ ಸ್ಪೋಟಗೊಂಡು ಬಸ್ ಹೊತ್ತಿ ಉರಿದ ಘಟನೆ ಹಿರಿಯೂರು ತಾಲೂಕಿನ ಉಯಿಲಾಳ ಟೋಲ್ ಬಳಿ ನಡೆದಿದೆ.
ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್ ನ ಟೈರ್ ಏಕಾಏಕಿ ಸ್ಪೋಟಗೊಂಡಿದೆ. ಪರಿಣಾಮ ಬಸ್ ಗೆ ಬೆಂಕಿ ತಗುಲಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಬಸ್ ನಲ್ಲಿ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕದ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.