alex Certify BREAKING : ರಾಜ್ಯದಲ್ಲಿ ಭೀಕರ ಅಪಘಾತ ; ರಸ್ತೆ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಕಾರು ಹರಿದು 7 ಮಂದಿಗೆ ಗಂಭೀರ ಗಾಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಭೀಕರ ಅಪಘಾತ ; ರಸ್ತೆ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಕಾರು ಹರಿದು 7 ಮಂದಿಗೆ ಗಂಭೀರ ಗಾಯ..!

ಉತ್ತರ ಕನ್ನಡ : ರಸ್ತೆಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು ಹರಿದ ಪರಿಣಾಮ 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕುಮಟಾ ರಸ್ತೆಯ ಹೀಪ್ನಳ್ಳಿ ಕ್ರಾಸ್ ನಲ್ಲಿ ನಡೆದಿದೆ.

ಕುಮಟಾ ರಸ್ತೆಯಲ್ಲಿರುವ ಹೀಪ್ನಳ್ಳಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ರಸ್ತೆ ಕೆಲಸ ಮಾಡಿದ ಕಾರ್ಮಿಕರೆಲ್ಲರೂ ವಿಶ್ರಾಂತಿಗೆಂದು ರಸ್ತೆ ಬದಿಯಲ್ಲೇ ಮಲಗಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಮಲಗಿದ್ದವರ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಒಟ್ಟು 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಮಗು ಸೇರಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಕಾರ್ಮಿಕರು ಹೈದರಾಬಾದ್ ನ ಮೆಹಬೂಬ ನಗರದ ನಿವಾಸಿಗಳಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...