ಬೆಂಗಳೂರು : ಜೆಸಿಬಿ ಹರಿದು 2 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ.
ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕನ ಮೇಲೆ ಜೆಸಿಬಿ ಹರಿದಿದೆ ಎಂದು ತಿಳಿದು ಬಂದಿದೆ. ಮೃತ ಬಾಲಕನನ್ನು ಥವನ್ ರೆಡ್ಡಿ (2) ಎಂದು ಗುರುತಿಸಲಾಗಿದೆ.
ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆ ಮರೆಸಿಕೊಂಡ ಜೆಸಿಬಿ ಚಾಲಕನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.