ಮೈಸೂರು : ಸಿಲಿಂಡರ್ ಸೋರಿಕೆಯಾಗಿ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಸಿಲಿಂಡರ್ ಸೋರಿಕೆಯಾಗಿ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.