ಹೊಸಕೋಟೆ : ಹನುಮನ ಜಯಂತಿಯಲ್ಲಿ ಪ್ರಸಾದ ಸೇವಿಸಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸಿದ್ದಗಂಗಮ್ಮ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಘಟನೆ ನಡೆದಿದೆ. ಹನುಮ ಜಯಂತಿಯ ಪ್ರಸಾದ ಸೇವಿಸಿದ ಮಹಿಳೆಗೆ ವಾಂತಿ ಭೇದಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಂತರ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ದೇವಸ್ಥಾನದಿಂದ ಗಂಡ ತಂದಿದ್ದ ಲಾಡು ಸೇವಿಸಿ ಮಹಿಳೆ ಸಿದ್ದಗಂಗಮ್ಮ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ. ಹನುಮ ದೇವಸ್ಥಾನದಲ್ಲಿ ಸೇವಿಸಿದ ಇನ್ನೂ 15 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.