ಬೆಂಗಳೂರು : ಬೆಂಗಳೂರಿನ ಮನೆಯೊಂದರಲ್ಲಿ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಂದಿನಿ ಎಂಬುವವರು ಮೃತಪಟ್ಟಿದ್ದಾರೆ. ಚಾಮರಾಜಪೇಟೆಯಲ್ಲಿ ನಿನ್ನೆ ರಾತ್ರಿ 9:30 ರ ವೇಳೆಗೆ ದುರ್ಘಟನೆ ಸಂಭವಿಸಿದೆ.
ಮನೆಯಲ್ಲಿ ಯಾರೂ ಇಲ್ಲದಾಗ ನಂದಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಬರುವಷ್ಟರಲ್ಲಿ ಕುಟುಂಬಸ್ಥರು ಶವ ಕೆಳಗಿಳಿಸಿದ್ದಾರೆ.ಮಹಿಳೆ ನಂದಿನಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.