ಬೆಂಗಳೂರು : ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ದೊಂಬರಹಳ್ಳಿಯಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಸಿದ್ದಲಿಂಗಯ್ಯ (29) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗುರುತಿಸಲಾಗಿದೆ.
ಸಿದ್ದಲಿಂಗಯ್ಯ ಅವರಿಗೆ ಬಾಗಲಕೋಟೆ ಮೂಲದ ಯುವತಿ ಜೊತೆ ಮದುವೆ ಫಿಕ್ಸ್ ಆಗಿತ್ತು, ಆದರೆ ವಯಸ್ಸಿನ ಅಂತರದ ಕಾರಣವೊಡ್ಡಿ ಯುವತಿ ಪೋಷಕರು 15 ದಿನದ ಹಿಂದೆ ಮದುವೆ ಕ್ಯಾನ್ಸಲ್ ಮಾಡಿದ್ದರು.
ಇದರಿಂದ ಮನನೊಂದು ಸಿದ್ದಲಿಂಗಯ್ಯ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಶವವನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.