ಬೆಂಗಳೂರು : ಟ್ಯಾಂಕರ್ ಹರಿದು ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ನಡೆದಿದೆ.
ಮೃತ ಯುವಕನನ್ನು ಕಿರಣ್ ಕುಮಾರ್ (21) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಕಿರಣ್ ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಕಿರಣ್ ತಲೆ ಮೇಲೆ ಟ್ಯಾಂಕರ್ ಹರಿದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಅಪಘಾತದಲ್ಲಿ ಮೃತಪಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.