ಚಿಕ್ಕಮಗಳೂರು : ಕೋರ್ಟ್ ಆವರಣದಲ್ಲೇ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದಿದೆ.
ಕಡೂರು ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ನ್ಯಾಯ ಸಿಗದಿದ್ದಕ್ಕೆ ಮನನೊಂದ ಯುವಕ ಕೋರ್ಟ್ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಲ್ಲಿಕಾರ್ಜುನ ಎಂಬುವವರು ಜಮೀನು ವಿವಾದವಾಗಿ ಕೋರ್ಟ್ ಗೆ ಬಂದಿದ್ದರು. ತಂದೆ ಮಾಡಿದ ಸಾಲದ ಸಲುವಾಗಿ, ಜಮೀನು ತಮಗೆ ಸಿಗಲೆಂದು ನ್ಯಾಯ ಕೇಳಲು ಕೋರ್ಟ್ ಗೆ ಬಂದಿದ್ದರು. ಆದರೆ ನ್ಯಾಯ ಸಿಗದ ಹಿನ್ನೆಲೆ ಮನನೊಂದು ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.