ದಾವಣಗೆರೆ : ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮೊಹಮದ್ ಜಾವೇದ್ (25) ಎಂಬುವವರನ್ನು ಕೊಲೆ ಮಾಡಲಾಗಿದೆ.
ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.