ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಜು.18 ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಅದೇ ರೀತಿ ಸೂರಜ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಜೂನ್ 22ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಜೂನ್ 23ರಂದು ಸಿಐಡಿ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಸೂರಜ್ ರೇವಣ್ಣನನ್ನು ಹಾಜರುಪಡಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.