ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದ ಮೇಲೆ ಇಂದು ಪೊಲೀಸರು ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದ ಮೇಲೆ ಶನಿವಾರ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ಎಂಬುವರು ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ಪೊಲೀಸರು ರಂಜನೀಶ್ (28) ಎಂಬಾತನನ್ನು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ Rajee ಹಿಂದೂ ಎಂಬ ಹೆಸರಿನ ಬಳಕೆದಾರನೊಬ್ಬ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಎನ್ನುವ ಆರೋಪ ಕೇಳಿ ಬಂದಿದ್ದು, ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 504, 505(1),(B) ರಡಿ ಪ್ರಕರಣ ದಾಖಲಿಸಿಕೊಂಡಿದ್ದರು.