ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಿಲ್ಸ್ ನಿವಾಸದ ಮೇಲೆ ದಾಳಿ ನಡೆಸುತ್ತಿರುವುದನ್ನು ತೋರಿಸುವ ಆಘಾತಕಾರಿ ವೀಡಿಯೊ ಈಗ ವೈರಲ್ ಆಗಿದೆ. ಕಾರ್ಯಕರ್ತರು ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದನ್ನು ವೀಡಿಯೊಗಳು ಸೆರೆಹಿಡಿದಿದೆ.
ಭಾನುವಾರ ಕಿಡಿಗೇಡಿಗಳ ಗುಂಪು ಅರ್ಜುನ್ ಅವರ ನಿವಾಸದ ಹೊರಗೆ ಟೊಮೆಟೊ, ಕಲ್ಲುಗಳನ್ನು ಎಸೆದಿತ್ತು.
ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕಲ್ಲು ತೂರಿ , ಹೂವಿನ ಕುಂಡಗಳನ್ನು ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದರು.ಅಲ್ಲು ಅರ್ಜುನ್ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಅಲ್ಲು ಅರ್ಜುನ್ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡು ಮನೆಯ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
అల్లు అర్జున్ ఇంటిపై రాళ్ళ దాడి
ఇంట్లోకి దూరి సెక్యూరిటీ మీద దాడి చేసి పూల కుండీలు ధ్వంసం pic.twitter.com/EbizXlId8x
— Telugu Scribe (@TeluguScribe) December 22, 2024