ಬೆಂಗಳೂರು : ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದ್ದು, ಆ.20 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಮನೆಯೂಟ, ಬಟ್ಟೆ, ಹಾಸಿಗೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಆ.20 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ತನಗೆ ಜೈಲಿನ ಊಟ ಒಗ್ಗೂಡುತ್ತಿಲ್ಲ, ಅಜೀರ್ಣ, ಅತಿಸಾರವಾಗುತ್ತಿದೆ. ಹಾಗಾಗಿ ಮನೆಯೂಟ ನೀಡಲು ಅವಕಾಶ ಕೊಡಬೇಕು ಇದರ ಜೊತೆ ಬಟ್ಟೆ, ಹಾಸಿಗೆ ಕೊಡಲು ಅವಕಾಶ ನೀಡುವಂತೆ ಕೋರಿ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.ಅದರಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ ಮ್ಯಾಜಿಸ್ಟ್ರೇಟ್ ಕೋರ್ಟ್ ನಟ ದರ್ಶನ್ ಅರ್ಜಿ ವಜಾಗೊಳಿಸಿ, ಕೊಲೆ ಆರೋಪಿಗೆ ಮನೆಯೂಟ, ಬಟ್ಟೆ, ಹಾಸಿಗೆ ನೀಡಲು ಅವಕಾಶವಿಲ್ಲ ಎಂದು ಆದೇಶ ನೀಡಿತ್ತು. ನಂತರ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಮನೆಯಿಂದ ಊಟ, ಬಟ್ಟೆ, ಹಾಸಿಗೆ ನೀಡಲು ಅವಕಾಶ ಕೊಡುವಂತೆ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.