ಬೆಂಗಳೂರು : ಬೆನ್ನುನೋವಿಗೆ ಆಪರೇಷನ್ ಮಾಡಿಸಿಕೊಳ್ಳಲು ನಟ ದರ್ಶನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸಂಕ್ರಾಂತಿ ಹಬ್ಬದ ವೇಳೆಗೆ ನಟ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದು, ಫೆಬ್ರವರಿಯಲ್ಲಿ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಬೆನ್ನುನೋವಿನ ಹಿನ್ನೆಲೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ನಟ ದರ್ಶನ್ ಆಪರೇಷನ್ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ನಟ ದರ್ಶನ್ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ವಾಪಸ್ ಬಂದಿದ್ದರು.
ಬೆನ್ನುನೋವಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಡಿಸ್ಚಾರ್ಜ್ ಆಗಿದ್ದರು. ನಂತರ ಕೋರ್ಟ್ ಮೈಸೂರಿಗೆ ತೆರಳಲು ಅನುಮತಿ ನೀಡಿದ ಬಳಿಕ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ನಟ ದರ್ಶನ್ ಭೇಟಿ ನೀಡಿದ್ದು, ವೈದ್ಯರ ಸಲಹೆ ಪಡೆದು ಫಾರ್ಮ್ ಹೌಸ್ ಗೆ ಮರಳಿದ್ದರು. ಇದೀಗ ಬೆನ್ನುನೋವಿಗೆ ಆಪರೇಷನ್ ಮಾಡಿಸಿಕೊಳ್ಳಲು ನಟ ದರ್ಶನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಬೆಂಗಳೂರಿನ ಸತ್ರ ನ್ಯಾಯಾಲಯವು ನಟ ದರ್ಶನ್ ಗೆ ಡಿ.20 ರಿಂದ ಜ.5 ರವರೆಗೆ ಮೈಸೂರಿಗೆ ತೆರಳಲು ಅನುಮತಿ ನೀಡಿತ್ತು. ಅನಾರೋಗ್ಯ ಪೀಡಿತರಾಗಿರುವ ತನ್ನ ತಾಯಿ ಜೊತೆ ಕಾಲ ಕಳೆಯಲು ಹಾಗೂ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮೈಸೂರಿಗೆ ತೆರಳಲು ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪುರಸ್ಕರಿಸಿ ಸಿಟಿ ಸಿವಿಲ್ ಕೋರ್ಟ್ ನ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದ್ದು, ಆರೋಪಿಗಳು ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.