ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡಗೆ ಮತ್ತೆ ಜೈಲೇ ಗತಿ ಆಗಿದ್ದು, ಅ.4 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57 ನೇ ಸಿಟಿ ಸಿವಿಲ್ ಕೋರ್ಟ್ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನೋರ್ವ ಆರೋಪಿ ರವಿಶಂಕರ್ ಜಾಮೀನು ಅರ್ಜಿಯನ್ನು ಮತ್ತೆ ಮುಂದೂಡಿಕೆ ಮಾಡಿದ್ದು, ಅ.4 ಕ್ಕೆ ನಿಗದಿಪಡಿಸಿದೆ. ಈ ಮೂಲಕ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲೇ ಗತಿಯಾಗಿದೆ.