ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆಯಾಗಿದ್ದು, ಈ ಮೂಲಕ ನಟ ದರ್ಶನ್ ಗೆ ಮತ್ತೆ ಜೈಲೇ ಗತಿಯಾಗಿದೆ.
ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57 ನೇ ಸಿಟಿ ಸಿವಿಲ್ ಕೋರ್ಟ್ ಅ.4 ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ನಿರಾಸೆಯಾಗಿದ್ದು, ಅ.4 ರವರೆಗೆ ಮತ್ತೆ ಜೈಲಿನಲ್ಲಿ ಕಾಲ ಕಾಳೆಯುವಂತಾಗಿದೆ.
ದರ್ಶನ್ ಪರ ವಕೀಲ ಸುನೀಲ್ ವಾದಮಂಡನೆಗೆ ಕಾಲಾವಕಾಶ ಕೇಳಿರುವ ಹಿನ್ನೆಲೆ ಕೋರ್ಟ್ ವಿಚಾರಣೆ ಮುಂದೂಡಿದೆ.