ಬೆಂಗಳೂರು : ಇತ್ತೀಚಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಜನವರಿ ಅಂತ್ಯದಲ್ಲಿ ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಆಪರೇಷನ್ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಪರೇಷನ್ ಸಕ್ಸಸ್ ಆಗಿದೆ. ಜನವರಿ 26 ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಬೇಡ ಎಂದು ಶಿವಣ್ಣನ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಶಿವಣ್ಣ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಅಲ್ಲೇ ರೆಸ್ಟ್ ಮಾಡಿ ಜನವರಿ 26 ಕ್ಕೆ ಭಾರತಕ್ಕೆ ಮರಳಲಿದ್ದಾರೆ.
ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ . ಸತತ 6 ಗಂಟೆಗಳ ಕಾಲ ಯಶಸ್ವಿ ಆಪರೇಷನ್ ನಡೆಸಲಾಗಿತ್ತು.
ಅಪ್ಪನ ಆರೋಗ್ಯದ ಬಗ್ಗೆ ಪೋಸ್ಟ್ ಮಾಡಿದ್ದ ಪುತ್ರಿ ನಿವೇದಿತಾ
”ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ”.
”ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸ್ಥೆರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
”ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ’.