ಬೆಂಗಳೂರು : ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, : ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದೆ. ಅವರು ಸಖತ್ ಫಿಟ್ ಆಗಿದ್ದಾರೆ. ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಶಿವಣ್ಣ ತಲೆಗೆ ಒಂದು ಸ್ಟಂಟ್, ಹೃದಯದಲ್ಲಿ ಒಂದು ಸ್ಟಂಟ್ ಅಳವಡಿಸಲಾಗಿದೆ. ಶಿವಣ್ಣ ಅವರು ಸಖತ್ ಫಿಟ್ ಆಗಿದ್ದು, ಜ.25 ರಂದು ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಹೇಳಿದ್ದಾರೆ.