ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಇದೀಗ ನಟ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ನಾಗವಾರದ ನಿವಾಸಕ್ಕೆ ತೆರಳಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು .ಆರೋಗ್ಯ ಸುಧಾರಿಸಿದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ನಾಳೆ ಅಥವಾ ನಾಡಿದ್ದು ಮತ್ತೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.