ಬೆಂಗಳೂರು : ನಟ ವಿನೋದ್ ರಾಜ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜೂ.12 ರಂದು ಆಪರೇಷನ್ ಗೆ ಒಳಗಾಗಿದ್ದ ನಟ ವಿನೋದ್ ರಾಜ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಜೂ.12 ರಂದು ಆಪರೇಷನ್ ಮಾಡಲಾಗಿತ್ತು.ವಿನೋದ್ ರಾಜ್ ಕೆಲ ವರ್ಷಗಳ ಹಿಂದೆ ಹಾರ್ಟ್ ಆಪರೆಷನ್ ಗೆ ಒಳಗಾಗಿದ್ದರು. ಈ ವೇಳೆ ಹಾರ್ಟ್ ಗೆ ಸ್ಟಂತ್ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್ ನಿಂದಾಗಿ ಕರುಳಿನ ಸಮಸ್ಯೆ ಎದುರಾಗಿತ್ತು.