ಬೆಂಗಳೂರು : ಬೆಂಗಳೂರಿನ ಯಲಹಂಕದಲ್ಲಿ ಏರ್ ಶೋ ನಡೆಯುತ್ತಿರುವ ಹಿನ್ನೆಲೆ ಬೆಂಗಳೂರಲ್ಲಿ ಭಯಂಕರ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.
ಹೌದು. ಏರ್ ಶೋ ಗೆ ಇಂದಿನಿಂದ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಏರ್ ಶೋ ನೋಡಲು ತೆರಳುತ್ತಿದ್ದಾರೆ. ಪರಿಣಾಮ ಜನರಿಗೆ ಬೆಳ್ಳಂ ಬೆಳಗ್ಗೆ ಟ್ರಾಫಿಕ್ ಜಾಮ್ ಬಿಸಿ ಉಂಟಾಗಿದೆ. ಯಲಹಂಕ ರಸ್ತೆ ಸಂಪರ್ಕಿಸುವ ರಸ್ತೆಗಳಲ್ಲಿ ಕಿಮೀಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ದಿನನಿತ್ಯದ ಕೆಲಸಕ್ಕೆ ಹೋಗುವವರು ಪರದಾಡಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಖ್ಯಾತಿಯ ‘ಬೆಂಗಳೂರು ಏರ್ ಶೋ’ ನಡೆಯುತ್ತಿದ್ದು, ಇಂದಿನಿಂದ ಸಾರ್ವಜನಿಕರು ಭಾಗವಹಿಸಬಹುದಾಗಿದೆ.