ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದ್ದು, ನಾಳೆ ರಾಜಧಾನಿ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್ ಮಾಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಸೆಪ್ಟೆಂಬರ್ 29ಕ್ಕೆ ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಸಂಬಂಧ ಇಂದು ವಾಟಾಳ್ ನಾಗರಾಜ್ ಮತ್ತು ಕನ್ನಡ ಸಂಘಟನೆಗಳು ನಡೆಸಿದ ಸಭೆಯಲ್ಲಿ ಸೆ.29 ರ ಶುಕ್ರವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ನಾಳೆ ಬೆಂಗಳೂರು ಬಂದ್ ಆಗುವುದು ಪಕ್ಕಾ ಆಗಿದೆ. ಎರಡು ದಿನದ ಅಂತರದಲ್ಲಿ ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿವೆ.