ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಂಚಿದ ಆರೋಪದ ಮೇಲೆ ಚುನಾವಣಾ ಆಯೋಗ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಬಿಜೆಪಿ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಳೆ ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿದೆ. ಈ ನಡುವೆ ಬಿಜೆಪಿ ನಾಯಕರಿಂದ ಕರ್ಯಕರ್ತರಿಗೆ ಭಾರಿ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡಲಾಗುತ್ತಿರುವ ಆರೋಪ ಕೇಳಿಬಂದಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ ತಾವು ತಂಗಿದ್ದ ವಿರಾರ್ ನ ಹೋಟೆಲ್ ನಲ್ಲಿ ಕಾರ್ಯಕರ್ತರಿಗೆ 5 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಬಹುಜನ ವಿಕಾಸ್ ಅಘಾಡಿ ಪಕ್ಷದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದು, ಹಣ ಹಂಚುತ್ತಿರುವುದುದನ್ನು ಪತ್ತೆ ಮಾಡಿ ನೋಟುಗಳ ಸಮೇತ ಕ್ಯಾಮರಾಗಳಿಗೆ ಪ್ರದರ್ಶಿಸಿದ್ದಾರೆ.
ಘಟನೆ ಸಂಬಂಧ ಚುನಾವಣಾ ಆಯೋಗ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಬಿಜೆಪಿ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.