ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ ಭೇಟಿಯ ವೇಳೆ ಪಕ್ಷದ ಯಾವುದೇ ಕಾರ್ಯಕ್ರಮಗಳು ನಿಗದಿಯಾಗಿಲ್ಲ.ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ @AmitShah ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಆತ್ಮೀಯವಾಗಿ ಸ್ವಾಗತಿಸಿದರು. pic.twitter.com/KA5sQOOlDA
— BJP Karnataka (@BJP4Karnataka) March 7, 2025