ಬೆಂಗಳೂರು : ಸೆ.7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.ದಿನಾಂಕ: 07.09.2023, ಗುರುವಾರ ಸಂಜೆ 4:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 8ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಲೋಕಸಭೆ ಚುನಾವಣೆ, ಗ್ಯಾರಂಟಿ ಯೋಜನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ.