ಬೆಂಗಳೂರು : ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ನಿರೂಪಕಿ ‘ದಿವ್ಯಾ ವಸಂತ’ ಕೊನೆಗೂ ಅರೆಸ್ಟ್ ಆಗಿದ್ದಾರೆ. ಬ್ಲ್ಯಾಕ್ ಮೇಲ್ , ಹಣ ಸುಲಿಗೆ ಮಾಡಿರುವ ಆರೋಪದ ಬಳಿಕ ನಾಪತ್ತೆಯಾಗಿದ್ದ ನಿರೂಪಕಿ ‘ದಿವ್ಯಾ ವಸಂತ’ ಕೊನೆಗೂ ಅರೆಸ್ಟ್ ಆಗಿದ್ದಾರೆ.
ಇತ್ತೀಚೆಗೆ ಇಂದಿರಾ ನಗರದ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣ ರಾಜಾನುಕುಂಟೆ ವೆಂಕಟೇಶ್ ಸೇರಿ ಇಬ್ಬರನ್ನು ಜಿ.ಬಿ. ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ದಿವ್ಯಾ ವಸಂತ’ ನಾಪತ್ತೆಯಾಗಿದ್ದರು. ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಅಡಗಿ ಕುಳತಿದ್ದ ದಿವ್ಯಾ ವಸಂತರನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ಬೆಳಕಿಗೆ ಬಂದ ನಂತರ ನಿರೂಪಕಿ ದಿವ್ಯಾ ವಸಂತ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು.ಇಂದಿರಾನಗರದ 100 ಅಡಿ ರಸ್ತೆ 15ನೇ ಮುಖ್ಯರಸ್ತೆಯ ವ್ಯವಸ್ಥಾಪಕ ಶಿವಶಂಕರ್ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ಈ ತಂಡ ಯತ್ನಿಸಿತ್ತು.
ನಿಮ್ಮ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಚಿತ್ರೀಕರಿಸಿದ್ದ ವಿಡಿಯೋವನ್ನು ಸ್ವಾ ವ್ಯವ್ಯವಸ್ಥಾಪನಿಗೆ ತೋರಿಸಿ ವೆಂಕಟೇಶ್ ಬೆದರಿಸಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೊನೆಗೆ 8 ಲಕ್ಷ ಕೊಡುವಂತೆ ಒತ್ತಾಯಿಸಿದ್ದರು. ಸ್ಪಾ ವ್ಯವಸ್ಥಾಪಕ ಪೊಲೀಸರಿಗೆ ದೂರು ನೀಡಿದ್ದು, ಮೊಬೈಲ್ ಕರೆಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.