
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಶ್ರದ್ಧಾ ವಾಕರ್ ಮಾದರಿಯಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು,ಯುವತಿಯನ್ನು ಕೊಂದು ದೇಹವನ್ನು ತುಂಡು ತುಂಡು ಮಾಡಿ ಬೀಸಾಕಿರುವ ಘಟನೆ ನಡೆದಿದೆ.
ದೆಹಲಿಯ ಗೀತಾ ಕಾಲೋನಿ ಪ್ರದೇಶದ ಫ್ಲೈಓವರ್ ಬಳಿಯ ಪೊದೆಗಳಲ್ಲಿ ಇಂದು ಬೆಳಿಗ್ಗೆ ಯುವತಿಯ ಶವ ಪತ್ತೆಯಾಗಿದೆ. ಶವವನ್ನು ಹಲವಾರು ತುಂಡುಗಳಾಗಿ ಕತ್ತರಿಸಲಾಗಿದೆ. ಘಟನೆ ವರದಿಯಾದ ಕೂಡಲೇ ದೆಹಲಿ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ತನಿಖೆ ಪ್ರಾರಂಭಿಸಿದೆ.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು,. ಫ್ಲೈಓವರ್ ಬಳಿ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಮಾಹಿತಿ ಪಡೆದ ಕೂಡಲೇ ತಂಡವು ಸ್ಥಳಕ್ಕೆ ಆಗಮಿಸಿ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೂಲಕ ಮೃತರನ್ನು ಮತ್ತು ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.
ಇತ್ತೀಚೆಗಷ್ಟೇ ದೆಹಲಿಯಲ್ಲಿ ಶ್ರದ್ಧಾಳ ಲಿವ್-ಇನ್ ಪಾರ್ಟ್ನರ್ ಅಫ್ತಾಬ್ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ಕೊಲೆಯ ನಂತರ, ಅವಳ ದೇಹವನ್ನು 35 ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಲಾಯಿತು. ಆರೋಪಿ ಮೃತ ದೇಹದ ಭಾಗಗಳನ್ನು ವಿವಿಧ ಸ್ಥಳಗಳಲ್ಲಿ ಎಸೆದಿದ್ದನ್ನು. ಈ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.