alex Certify BREAKING : ಬಿಗ್ ಬಾಸ್ ಸ್ಪರ್ಧಿ ‘ತನಿಷಾ ಕುಪ್ಪಂಡ’ ವಿರುದ್ಧ ಮತ್ತೊಂದು ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಗ್ ಬಾಸ್ ಸ್ಪರ್ಧಿ ‘ತನಿಷಾ ಕುಪ್ಪಂಡ’ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಬೋವಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಬಿಗ್ ಬಾಸ್ ಮನೆಯಲ್ಲಿರುವ ನಟಿ ತನಿಶಾ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್ ಸಿ ಎಸ್ ಟಿ ಕಾಯಿದೆಯಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈ ಮೊದಲು ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು,

ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪುಂಡ ವಿರುದ್ಧ ದೂರುಗಳು ದಾಖಲಾಗಿದೆ. ಡ್ರೋನ್ ಪ್ರತಾಪ್ ಹಾಗೂ ತನಿಷಾ ನಡುವೆ ನಡೆದ ಸಂಭಾಷಣೆ ವೇಳೆ ತನಿಷಾ ‘ವಡ್ಡ’ ಎಂಬ ಪದ ಬಳಕೆ ಮಾಡಿದ್ದಾರೆ, ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ . ಪದ್ಮಾ ಈ ದೂರು ನೀಡಿದ್ದರು. ಹಾಗೂ, ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಪೊಲೀಸರು ಬಿಗ್ ಬಾಸ್ ಆಡಳಿತ ಮಂಡಳಿಗೆ ನೋಟಿಸ್ ನೀಡಿದ್ದು, ಅಸಲಿ ಫೂಟೇಜ್ ಕೊಡಲು ಸೂಚನೆ ನೀಡಿದ್ದಾರೆ..

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...