ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 13 ವರ್ಷದ ಬಾಲಕಿ ಮೇಲೆ 40 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿದ ಕಾಮುಕ ಐಸ್ ಕ್ರೀಂ, ಚಾಕೊಲೇಟ್ ಕೊಡಿಸಿ ನಿನ್ನೆ ಗೋದಾಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.ವಿಚಾರ ತಿಳಿಸಿದ ಬಾಲಕಿಯ ಪೋಷಕರು ಆರೋಪಿಯನ್ನು ಥಳಿಸಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸ್ಕ್ಯಾಪ್ ಅಂಗಡಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದನು. ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮಾಂಧರು ಚಿಕ್ಕಮಕ್ಕಳು ಎನ್ನದೇ ಅಟ್ಟಹಾಸ ಮೆರೆಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.