ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು, ಪತ್ನಿ, ಪ್ರಿಯಕರನನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶೀಲಶಂಕಿಸಿ ಪತ್ನಿ ಹಾಗೂ ಪ್ರಿಯಕರನನ್ನು ಹತ್ಯೆ ಮಾಡಿದ್ದಾನೆ. ಮರದ ತುಂಡಿನಿಂದ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿ ನಂತರ ತಾನೂ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆರ್ ಬಿ ಐ ಲೇಔಟ್ ನ ಸೋಮೇಶ್ವರದ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ತಡರಾತ್ರಿ ದುರಂತ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಸೇರಿದಂತೆ ಇನ್ನಷ್ಟು ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.