![](https://kannadadunia.com/wp-content/uploads/2024/01/yash-suranagi.png)
ಗದಗ : ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾನೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (22) ಎಂದು ಗುರುತಿಸಲಾಗಿದೆ.
ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು (ಪೊಲೀಸ್ ಬೆಂಗಾವಲು ವಾಹನ) ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೂಡಲೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಸದ್ಯ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.