
ಬೆಂಗಳುರು : ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ.
ತುಮಕೂರು ರಸ್ತೆ ಕಡೆಯಿಂದ ಹೊಸೂರು ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತ ಬೈಕ್ ಸವಾರನನ್ನು ಪ್ರಸನ್ನ (37) ಎಂದು ಗುರುತಿಸಲಾಗಿದೆ.
ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ವಾಹನ ಚಾಲಕ ವಾಹನದ ಸಮೇತ ಪರಾರಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕೆಂಗೇರಿ ಸಂಚಾರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.