alex Certify BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗುಜರಿ ಅಂಗಡಿ ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಗುಜರಿ ಅಂಗಡಿ ಸುಟ್ಟು ಭಸ್ಮ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಲಗ್ಗೆರೆ ಬಳಿ ಗುಜರಿ ಸುಟ್ಟು ಭಸ್ಮವಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಗುಜರಿ ಅಂಗಡಿಹೊತ್ತಿ ಉರಿದಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.ಟ್ರಾನ್ಸ್ ಫಾರ್ಮರ್ ಸ್ಪೋಟದಿಂದ ಬೆಂಕಿ ಅವಘಡ ಸಂಭವಿಸಿದ್ದು, ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕದ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಪಟಾಕಿ ದುರಂತ ಬೆನ್ನಲ್ಲೇ ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಸಾಲು ಸಾಲು ಅಗ್ನಿ ಅವಘಡಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...